ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಪೂರ್ವ ಭಾಗದ ಶ್ರೀ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಹಾಗೂ ಸಚಿವ ಸಂಪುಟದ ಸದಸ್ಯರು ಮಂಜೂರಾತಿ ನೀಡಿದ್ದರಿಂದ ವಿವಿಧ ಗ್ರಾಮಸ್ಥರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪೂರ್ವ ಭಾಗದ ರೈತರ ಹಾಗೂ ನನ್ನ ಬಹುದಿನಗಳ ಕನಸಿನ ಯೋಜನೆಗಳಲ್ಲಿ ಒಂದಾದ ಈ ಯೋಜನೆ ಮಂಜೂರಾತಿ ಪಡೆದಿದ್ದರಿಂದ ಕಕಮರಿ ಹಾಗೂ ತೆಲಸಂಗ ಗ್ರಾಮಸ್ಥರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ತಮ್ಮ ಭೂಮಿಗೆ ಕೃಷ್ಣ ನದಿಯ ನೀರು ಒದಗಿಸುವ ಈ ಯೋಜನೆ ಜಾರಿಯಿಂದ ರೈತರ ಬಹು ದಿನಗಳ ಬೇಡಿಕೆ ಇಡೆರಿದೆ. ನೀರಾವರಿ ವಂಚಿತ 25 ಸಾವಿರ ಎಕರೆ ಪ್ರದೇಶಕ್ಕೆ ಸಮುದಾಯ ನೀರಾವರಿ ಸೌಲಭ್ಯ ಕಲ್ಪಿಸುವ ಮತ್ತು 17 ಕೆರೆಗಳನ್ನು ತುಂಬಿಸಲು ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು 1486.41 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ಇದರಿಂದ ಪೂರ್ವ ಭಾಗದ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮಗಳಲ್ಲಿ ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರು, ಯುವಕರು, ಪಕ್ಷದ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
*ವರದಿ ರವಿ ಬಿ ಕಾಂಬಳೆ ಬೆಳಗಾವಿ