ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾಣದಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Share the Post Now

ವರದಿ:ಸಚಿನ ಕಾಂಬ್ಳೆ.

ಅಥಣಿ: ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಅಡಿಯಲ್ಲಿ ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪಂಚಾಯತ ರಾಜ್ ಇಲಾಖೆ ಮತ್ತು KHPT ಸಹಯೋಗದೊಂದಿಗೆ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಅಡಿಯಲ್ಲಿ ಪಂಚಾಯಿತಿ ಹೆಲ್ತ್ ಕಿಟ್ ಬ್ಯಾಗ್ ಉಪಯೋಗಿಸಿ ಉಚಿತ ಆರೋಗ್ಯ ತಪಾಸನೆ ಶಿಬಿರ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಅ ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ ಜಾಗೃತಿ ಬಾಲ್ಯ ವಿವಾಹ ತಡೆಗಟ್ಟುವಿಕೆ, ಲಸಿಕ ಜಾಗೃತಿ,ಟಿಬಿ, ಡೆಂಗು ಮಲೇರಿಯಾ, ಚಿಕೂನ್ ಗುನ್ಯಾಗಳಂತಹ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಾಂಕ್ರಾಮಿಕ ವಲ್ಲದ ರೋಗಗಳ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಸಮುದಾಯದ ಆರೋಗ್ಯ ಅಧಿಕಾರಿಗಳಾದ CHO ಡಾ.ಸಂದೀಪ್ ಜಗತಾಪ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ HIO ಡಾ.ಶಿವು ತೇಲಿ ಅವರು ಸುಮಾರು 200ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆಯನ್ನು ಮಾಡಿ ಸೂಕ್ತ ಔಷಧವನ್ನು ನೀಡಿದರು.
ಇದೆ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ನಿಂಗಪ್ಪಾ ಅವಟಿ ಅವರು ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿದು ಈ ಶಿಬಿರಕ್ಕೆ ಅನುಕೂಲವಾಗಲಿ ಎಂದು ಹಲವಾರು ಔಷಧಿಗಳನ್ನು ಉಚಿತವಾಗಿ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪಿಕೆಪಿಎಸ್ ಕಾರ್ಯದರ್ಶಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ KHPT ಯ ಸ್ವಯಂ ಸೇವಕರಾದ ಶ್ರೀಶೈಲ ಸತ್ತಿ ಹಾಗೂ ಆಶಾ ಕಾರ್ಯಕರ್ತೆಯರಾದ ಕವಿತಾ ಮಾಳಿ ಹನಿಪಾ ಮುಜಾವರ್ ಶಮಿರಾ ಬಿರಾದಾರ್ ಹಾಗೂ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!