ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದೆ : ಡಾ.ಎ.ಎಚ್.ಹವಾಲ್ದಾರ

Share the Post Now

ವರದಿ:ಸಚಿನ ಕಾಂಬ್ಳೆ.


ಗೋಕಾಕ ಡಿ 25 : ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದ್ದು, ಸಮಾಜದಲ್ಲಿ ಮಹತ್ವದ ಸ್ಥಾನ ಪಡೆದಿದೆ ಎಂದು ಬೆಳಗಾವಿ ಆರ್.ಎಲ್.ಎಸ್. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ ಹೇಳಿದರು.
ರವಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಕ್ರೀಡಾ ಹಾಗೂ ಸಾಂಸ್ಕೃತಿಕ ಚುಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿಯ ಅನ್ಯಾಯಗಳಿಗೆ ಸ್ವಂದಿಸುವ ವೃತ್ತಿ ಇದಾಗಿದ್ದು, ಕಾನೂನು ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ಶಿಸ್ತಿನಿಂದ ಕಲಿತು ಜನರಿಗೆ ನ್ಯಾಯ ದೊರಕಿಸಬೇಕು. ದೇಶದಲ್ಲಿ ಕಾನೂನಿಗೆ ಹೆಚ್ಚಿನ ಬೆಲೆಇದ್ದು, ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗುತ್ತಿದೆ. ಜನರು ಕಾನೂನಿನ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹೆಚ್ಚಿನ ಒಲವು ವ್ಯಕ್ತಪಡಿಸುತ್ತಿದ್ದು, ಅವರಿಗೆ ಸಾಮಾಜಿಕ ನ್ಯಾಯ ದೊರೆಕಿಸಿಕೊಡುವದ ರೊಂದಿಗೆ ಉತ್ತಮ ಸಮಾಜ ನಿರ್ಮಿಸಲು ಶ್ರಮಿಸುವಂತೆ ಕರೆ ನೀಡಿದ ಅವರು ನನ್ನ ವೃತ್ತಿ ಜೀವನವೂ ಇದೇ ಸಂಸ್ಥೆಯಯಲ್ಲಿ ಪ್ರಾರಂಭಿಸಿದ್ದು, ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದವರು ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ಹೇಳಿದರು
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಲ್ಲಿನ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿ.ಡಿ.ಹುಕ್ಕೇರಿ ಕಾನೂನು ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವೃತ್ತಿ ಜೀವನದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯ ನಿರ್ವಹಿಸುವಂತೆ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಪ್ರಾಚಾರ್ಯರಾದ ಜಿ.ಆರ್.ನಿಡೋನಿ, ಐ.ಎಸ್.ಪವಾರ, ಆಡಳಿತಾಧಿಕಾರಿ ಬಿ.ಕೆ ಕುಲಕರ್ಣಿ ಇದ್ದರು.

Leave a Comment

Your email address will not be published. Required fields are marked *

error: Content is protected !!