ಬೆಳಗಾವಿ
ವರದಿ :ಸಚಿನ್ ಕಾಂಬ್ಳೆ
ಅಥಣಿ: ಶ್ರೀ ಬಸವೇಶ್ವರ ಶಿಕ್ಷಣ ಸಮಿತಿಯ
ಶ್ರೀ ಬಸವೇಶ್ವರ ಕನ್ನಡ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ126ನೇ ಜಯಂತಿ ಆಚರಣೆ ಮಾಡಲಾಯಿತು.
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಾತನಾಡಿದ ಮಹಾಂತೇಶ ಹಿರೇಮಠ , ನೇತಾಜಿ ಸುಭಾಷ್ ಚಂದ್ರ ಬೋಸ್ ರು ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರ್ಯಕ್ಕೆ ಸಶಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದ್ದಾರೆ ಎಂದು ಹೇಳಿದರು.
ಅತಿಥಿಗಳಾಗಿ ಭಾಗವಹಿಸಿದ ಕು. ಶ್ವೇತಾ ವಸ್ತ್ರದ ಅವರು ಮಾತನಾಡಿ,ಸುಭಾಷ್ ಚಂದ್ರ ಬೋಸ್ ಅವರ ಜೀವನ ಚರಿತ್ರೆ ಹಾಗೂ ಅವರು ಮಾಡಿದ ಸಾಧನೆಗಳ ಬಗ್ಗೆ ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಸಂಸ್ಥೆಯ ಅಧ್ಯಕ್ಷರಾದ ಆರ್. ಎಂ. ಪಾಟೀಲ್ ಅವರು ಸುಭಾಷ್ ಚಂದ್ರ ಬೋಸ್ ಬಗ್ಗೆ ಹಲವಾರು ಕಥೆ ಕವನ ಹೇಳಿ ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಅಭಿಮಾನ ಮೂಡಿಸಿದರು ಎಲ್ಲಾ ವಿದ್ಯಾರ್ಥಿಗಳು ಸುಭಾಷ್ ಚಂದ್ರ ಬೋಸ್ ರಂತೆ ಆಗಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಗಳು ಆಗಿರುವ ಶ್ರೀಮತಿ ಎಸ್. ಆರ್. ಪಾಟೀಲ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು. ಕುಮಾರಿ. ಕೆ. ಬಿ. ಚನ್ನದಾಸರ ನಿರೂಪಿಸಿದರು ಶ್ರೀಮತಿ ಸುಧಾ ಬಿರಾದಾರ್ ಅವರು ಸ್ವಾಗತಿಸಿದರು ಹಾಗೂ ಕುಮಾರಿ ಅನಿತಾ ಅಲಕನೂರ್ ವಂದಿಸಿದರು.