ಭಾರೀ ದಂಡದ ಎಚ್ಚರಿಕೆ ಕೊಟ್ಟ ಸಾರಿಗೆ ಇಲಾಖೆಬೆಂಗಳೂರು: ಸಾರಿಗೆ ಇಲಾಖೆ ವತಿಯಿಂದ ರಾಜ್ಯದಲ್ಲಿ 2019ರ ಎ.1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲ(ಹಳೆಯ/ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಸುರಕ್ಷಿತ ನೋಂದಣಿ ಫಲಕಗಳನ್ನು(ಎಚ್.ಎಸ್.ಆರ್.ಪಿ)ಅಳವಡಿಸುವುದು ಕಡ್ಡಾಯವಾಗಿದೆ.
ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯ ವಾಹನಗಳಿಗೆ ನಿಯಮ ಅನ್ವಯವಾಗಲಿದೆ. ನವೆಂಬರ್ 17ರಂದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನ. ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ನಿಯಮ ಅನ್ವಯವಾಗಲಿದೆ. transport.karnataka.gov.in, www.siam.inನಲ್ಲಿ ನೋಂದಣಿಗೆ ಅವಕಾಶವಿದೆ.
*ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್, IND ಮಾರ್ಕ್, ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ ಎಚ್.ಎಸ್.ಆರ್.ಪಿ/ ಒಂದೇ ರೀತಿಯ ಪ್ಲೇಟ್ ಗಳು/ ಸ್ಮಾರ್ಟ್ ನಂಬರ್ ಪ್ಲೇಟ್ ಗಳನ್ನು ಅಳವಡಿಸುವಂತಿಲ್ಲ.
*ಅವುಗಳು ಎಚ್.ಎಸ್.ಆರ್.ಪಿ ಫಲಕಗಳಾಗಿರುವುದಿಲ್ಲ, ಎಚ್.ಎಸ್.ಆರ್.ಪಿ ಅಳವಡಿಸದ ಹೊರತು, ವಾಹನ ಮಾಲಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
*ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ ಎಚ್.ಎಸ್.ಆರ್.ಪಿ ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್.ಎಸ್.ಆರ್.ಪಿ ರಸೀದಿಯನ್ನು ಪ್ರಸುತ್ತಪಡಿಸುವ ವಾಹನಗಳಿಗೆ ಯಾವುದೆ ದಂಡವಿರುವುದಿಲ್ಲ. ಒಂದು ವೇಳೆ ನಿಗದಿತ ಅವಧಿಯೊಳಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದಿದ್ದರೆ ವಾಹನಗಳಿಗೆ 500ರಿಂದ 1 ಸಾವಿರ ರು. ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಲಾಗಿದೆ ಎಂದು ಎಚ್.ಎಸ್.ಆರ್.ಪಿ ಅಳವಡಿಕೆಗೆ ನ.17 ಕೊನೆಯ ದಿನವಾಗಿರುತ್ತದೆ ಎಂದು ಸಾರಿಗೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





