ಆಗಸ್ಟ್ 23ನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಪ್ರಧಾನಿ ಮೋದಿ

Share the Post Now

ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವಾದ ಆಗಸ್ಟ್ 23ನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ ಎಂದು ಅವರು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗ್ತಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *

error: Content is protected !!