ಬೆಳಗಾವಿ
ವರದಿ :ಸಚಿನ್ ಕಾಂಬ್ಳೆ
ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ *ಜಕಾರಟ್ಟಿ* ಗ್ರಾಮದಲ್ಲಿ ಪ್ರತಿಯೊಂದು ಮನೆಮನೆಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸುವ ಮಹತ್ವದ ಯೋಜನೆಗೆ
*ಸುಮಾರು 2.4 ಕೋಟಿ ರೂ.* ವೆಚ್ಚದ ಕಾಮಗಾರಿಗೆ *ಕಾಗವಾಡ ಮತಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ (ತಾತ್ಯಾ) ಪಾಟೀಲ* ಅವರು ಭೂಮಿ ಪೂಜೆ ನೇರವೇರಿಸಿದರು.
ಈ ಸಮಯದಲ್ಲಿ ಸ್ಥಳೀಯರು ಮಾತನಾಡಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಕಾಗವಾಡ ಮತಕ್ಷೇತ್ರದಲ್ಲಿ ನೀರಾವರಿ, ಶಿಕ್ಷಣ, ರಸ್ತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಅದೇ ರೀತಿ ಗ್ರಾಮದ ಪ್ರತಿಯೊಂದು ಮನೆಮನೆಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಮಹತ್ವದ ಯೋಜನೆಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ್ದು, ಸಮಸ್ತ ಅವರಿಗೆ ನಮ್ಮ ಗ್ರಾಮಸ್ಥರ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಕೋರುತ್ತೇವೆ ಎಂದರು.
ಈ ಸಮಯದಲ್ಲಿ ಶಾಸಕರು ಮಾತನಾಡಿ, ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವದ ಯೋಜನೆಯಾದ ಪ್ರತಿಯೊಂದು ಮನೆ ಮನೆಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸುವ ಮಹತ್ವದ ಯೋಜನೆಯಾದ ಜಲಜೀವನ ಮಿಷನ್ ಯೋಜನೆಯನ್ನು ಸುಮಾರು 2.4 ಕೋಟಿ ರೂ. ಗಳ ಅನುದಾನವನ್ನು ಮಂಜೂರುಗೊಳಿಸಿ ಇವತ್ತು ಭೂಮಿ ಪೂಜೆನೆರವೇರಿಸಿದ್ದು, ಶೀಘ್ರದಲ್ಲಿ ಈಗ ಯೋಜನೆಯನ್ನು ಪೂರ್ಣಗೊಳಿಸಿ ಪ್ರತಿಯೊಂದು ಮನೆ ಮನೆಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಕಲ್ಪಿಸಲಾಗುವುದು ಎಂದರು.
ಈ ಸಮಯದಲ್ಲಿ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಎಲ್ಲ ಸದಸ್ಯರು, ಜೆಜೆಎಮ್ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.