ಬೆಳಗಾವಿ
ವರದಿ :ಸಚಿನ್ ಕಾಂಬ್ಳೆ ಕಾಗವಾಡ
ಕಾಗವಾಡ :ನಡೆದಾಡುವ ದೇವರು, ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ಸುದ್ದಿ ಬೇಸರದ ಸಂಗತಿ ಇಂದು ಕೆಂಪವಾಡದ ಶಾಸಕರ ಕೇಂದ್ರ ಕಛೇರಿಯಲ್ಲಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಅಪ್ಪಾಜಿಯವರ ಭಾವಚಿತ್ರಕ್ಕೆ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಈ ಸಮಯದಲ್ಲಿ ಸ್ಥಳೀಯ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.