ಬೆಳಗಾವಿ
ವರದಿ: ಶಶಿಕಾಂತ ಪುಂಡಿಪಲ್ಲೆ
ಅಥಣಿ : ಅಥಣಿಯ ವಿದ್ಯುತ್ ಕೇಂದ್ರದಲ್ಲಿ ಬೃಹತ್ ವಿದ್ಯುತ್ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಚಾಚಿ ಇಡೀ ವಿದ್ಯುತ್ ಕೇಂದ್ರವನ್ನೇ ವ್ಯಾಪಿಸುವಷ್ಟು ಜ್ವಾಲೆ ಹರಡಿದೆ ಇದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಅಥಣಿ ಪಟ್ಟಣದ ವಿಜಯಪುರ ರಸ್ತೆಗೆ ಹೊಂದಿಕೊಂಡ ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ ಸುಮಾರು 09:15ಕ್ಕೆ ಘಟನೆ ಸಂಭವಿಸಿದೆ. ಘಟನೆಗೆ ನಿಖರ ಕಾರಣ ಗೊತ್ತಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕದಳ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.