ಹಲ್ಯಾಳ ಕೃಷ್ಣ ಸಕ್ಕರೆ ಕಾರ್ಖಾನೆಗೆ ಅಗ್ನಿ ಅವಘಡ

Share the Post Now

ವರದಿ :ಸಿದ್ದಾರೋಡ ಬಣ್ಣದ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ವನಹಿಪ್ಪಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಕೆಲಹೊತ್ತು ಕಾರ್ಖಾನೆಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ತಕ್ಷಣ ಸ್ಥಳಕ್ಕಾಗಮಿಸಿದ ಅಥಣಿಯ ಅಗ್ನಿಶಾಮಕ ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸದ್ಯ ಬೆಂಕಿ ಹತೋಟಿಗೆ ಬಂದಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *

error: Content is protected !!