ಬೆಳಗಾವಿ
ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ನೆರವೇರಿನದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ
ವರದಿ :ಸಚಿನ್ ಕಾಂಬ್ಳೆ
ಅಥಣಿ: ಪಟ್ಟಣದ ಶಿವಾಜಿ ವೃತ್ತದಲ್ಲಿ ದಿ. 19-02-23ರಂದು ಜರುಗಿದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಬಿಜೆಪಿ ರಾಜ್ಯ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸಂಗಪ್ಪ ಸವದಿಯವರು ಪಾಲ್ಗೊಂಡು ಮಾತನಾಡಿದರು.
ಶಿವಾಜಿ ಮಹಾರಾಜರ ಮೂರ್ತಿಗೆ ಪುಷ್ಪ ಸಮರ್ಪಿಸಿ, ಪೂಜೆ ನೆರವೇರಿಸಿದರು. ಶಿವಾಜಿ ಮಹಾರಾಜರ ಐತಿಹಾಸಿಕ ಚರಿತ್ರೆ, ಅವರ ಶೌರ್ಯ, ಸಾಹಸಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ವಿವಿಧ ಮುಖಂಡರು, ಪುರಸಭೆ ಸದಸ್ಯರು, ಮರಾಠಾ ಸಮಾಜ ಬಾಂಧವರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಂಡಿದ್ದರು. ಅಥಣಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.