ಬೆಳಗಾವಿ
ಬೆಳಗಾವಿಯ ಡಿಸಿಸಿ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಭಾಗವಹಿಸಿದ ಡಾ.ಅಂಜಲಿತಾಯಿ ನಿಂಬಾಳ್ಕರ
ಖಾನಾಪೂರ :ತಾಲೂಕಿನ ಶಾಸಕರಾದ ಡಾ ಅಂಜಲಿತಾಯಿ ನಿಂಬಾಳ್ಕರ ಅವರು ಬೆಳಗಾವಿಯ ಡಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಾಗವಹಿದರು. ಮಾರ್ಚ್ 20ರಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ನಮ್ಮ ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಡಿಸಿಸಿ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದಿಪಸಿಂಘ ಸುರ್ಜೇವಾಲಾರವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ DK ಡಿಕೆ ಶಿವಕುಮಾರ್ ಅವರು ಮತ್ತು ಕಾರ್ಯದ್ಯಕ್ಷರಾದ ಸತೀಶ ಜಾರಕಿಹೊಳಿ ಮತ್ತು ಸಲಿಂ ಅಹ್ಮದ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಸಭೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಹಾಂತೇಶ್ ಕೌಜಲಗಿ,ಗಣೇಶ್ ಹುಕ್ಕೇರಿ,ಲಕ್ಷ್ಮಿ ಹೆಬ್ಬಾಳಕರ ಹಾಗೂ ಮಾಜಿ ಶಾಸಕರು ಮತ್ತು ಪಕ್ಷದ ಪ್ರಮುಖ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು..