ತೇರದಾಳ : ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷದ ಅಭ್ಯರ್ಥಿಗಳು ತಮ್ಮದೆಯಾದ ಕಸರತ್ತು ನಡೆಸಿದ್ದಾರೆ ಆದರೆ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಒತ್ತಾಯ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ ಬಲ್ಲ ಮೂಲಗಳ ಮಾಹಿತಿ ಪ್ರಕಾರ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ಮಾಹಿತಿ ಬರುತ್ತಿದೆ ಇನ್ನು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಚಿನ್ ಕವಳ್ಳಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಉಮಾಶ್ರೀ ಅವರಿಗೆ ಟಿಕೆಟ್ ನಿಶ್ಚಿತ. ಅದರಲ್ಲಿ ಯಾವುದೇ ಸಂಶಯವಿಲ್ಲ ಈ ಬಾರಿ ತೇರದಾಳ ಮತಕ್ಷೇತ್ರದಲ್ಲಿ ಉಮಾಶ್ರೀ ಅವರ ಗೆಲುವು ನಿಶ್ಚಿತ ಎಂದು ಹೇಳಿದರು ಇನ್ನು ಇದೆ ಸಂದರ್ಭದಲ್ಲಿ ಮಹಾಂತೇಶ್ ನೆಸೂರ್ ಶಿವಾನಂದ ಕವಳ್ಳಿ ಇನ್ನು ಕೆಲವರು ಉಪಸ್ಥಿತರಿದ್ದರು