*ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಪ್ರಯತ್ನ: ಬೆಳಗುಂದಿ ಆಸ್ಪತ್ರೆಗೆ ಈಗ ಸೋಲಾರ್
ಈಗಾಗಲೆ ಯೋಜನೆ ಪೂರ್ಣಗೊಂಡಿದ್ದು, ಒಂದು ತಿಂಗಳು ಪ್ರಾಯೋಗಿಕ ಬಳಕೆಯೂ ಯಶಸ್ವಿಯಾಗಿದೆ. ಈ ಯೋಜನೆಯಿಂದಾಗಿ ಬೆಳಗುಂದಿ ಮತ್ತು ಸುತ್ತಲಿನ 4 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅನುಕೂಲವಾಗಿದೆ. ಅವರು ಯಾವುದೇ ಸಂದರ್ಭದಲ್ಲಿ ಆಸ್ಪತ್ರೆಗೆ ಬಂದರೂ ವಿದ್ಯುತ್ ಸಮಸ್ಯೆ ಕಾಡುವುದಿಲ್ಲ. ರಾತ್ರಿ ವೇಳೆ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಹಾಯವಾಗಿದೆ.“ಮುಂದಿನ ದಿನಗಳಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸೋಲಾರ್ ವ್ಯವಸ್ಥೆ ಅಳವಡಿಸಲು ಸೆಲ್ಕೋ ಸೋಲಾರ್ ಜೊತೆ ಮಾತುಕತೆ ನಡೆಸಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ”-ಲಕ್ಷ್ಮೀ ಹೆಬ್ಬಾಳಕರ್, ಶಾಸಕರು“ಈ ಮೊದಲು ವಿದ್ಯುತ್ ಸಮಸ್ಯೆಯಿಂದಾಗಿ ಚಿಕಿತ್ಸೆ ನೀಡಲು ತೊಂದರೆಯಾಗುತ್ತಿತ್ತು. ಈಗ ಸೋಲಾರ್ ವ್ಯವಸ್ಥೆಯಿಂದಾಗಿ ಶಸ್ತ್ರ ಚಿಕಿತ್ಸೆಗಳಿಗೂ ಅನುಕೂಲವಾಗಿದೆ”-ಡಾ.ರಾಮಕೃಷ್ಣ, ಬೆಳಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರ“ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ ನಗರದತ್ತ ಮುಖ ನೋಡುವ ಸ್ಥಿತಿ ಇತ್ತು. ಹಾಗಾಗಿ ಸೆಲ್ಕೋ ಸಂಸ್ಥೆ ಸೌರ ವಿದ್ಯುತ್ ಮೂಲಕ ಆಸ್ಪತ್ರೆಗಳ ನೇರವಿಗೆ ಧಾವಿಸುತ್ತಿದೆ