ಜು.2ರಂದುಚನ್ನದಾಸರವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಜರುಗಲಿದೆ

Share the Post Now

ಹಾರೂಗೇರಿ :ಜಿಲ್ಲಾ ಚನ್ನದಾಸರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಜು 02 ರಂದು ಬೆಳಿಗ್ಗೆ 10.30 ಗಂಟೆಗೆ ಚನ್ನವೃಷಭೇoದ್ರ ಲೀಲಾ ಮಠದ ಪೂಜ್ಯ ಡಾ. ಶಿವಾನಂದ ಭಾರತಿ ಸಭಾ ಭವನದಲ್ಲಿ ನಡೆಯಲಿರುವ ಡಾ ಯಲ್ಲಪ್ಪ ಇಮ್ಮಡಿಯವರ ಶಷ್ಠಬ್ದಿ ಹಾಗೂ 2021-22 ಮತ್ತು 2022-23 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಮೆಟ್ರಿಕ್, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಜರುಗಲಿದೆ ಎಂದು ಜಿಲ್ಲಾ ಚನ್ನದಾಸರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ನಾಗೇಶ ಕಾಮಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಟ್ಟಣದ ಕಾಳಿಕಾದೇವಿ ದೇವಸ್ಥಾನದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಹಾಗೂ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಉದಯ ಗಾಣಿಗೇರ, ಶಿಕ್ಷಕ ರಾಮು ಗಾಣಿಗೇರ, ಸಮಾಜ ಸೇವಕ ಮಾರುತಿ ಮಾಳಿಗೆನ್ನವರ, ಇನ್ನು ಅನೇಕ ಸಮಾಜದ ಸದಸ್ಯರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!