ಖಾನಾಪುರ :ಹಲಸಿ ಗ್ರಾಮ ಪಂಚಾಯತ ವತಿಯಿಂದ ಸಂಪನ್ಮೂಲ ನಿರ್ವಹಣಾ ಘಟಕ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಲಾಯಿತು.
ಖಾನಾಪುರ ತಾಲೂಕಿನ ಐತಿಹಾಸಿಕ ಹಿನ್ನೆಲೆ ಉಳ್ಳ ಹಲಸಿ ಗ್ರಾಮದಲ್ಲಿ ಇಂದು ಎಂ ಜಿ ಎನ್ ಆರ್ ಜಿ ಯೋಜನೆ ಅಡಿಯಲ್ಲಿ ಸುಮಾರು 20 ಲಕ್ಷ ರೂಪಾಯಿಗಳಲ್ಲಿ ನಿರ್ಮಿಸಿರುವ ಸಂಪನ್ಮೂಲ ನಿರ್ವಹಣಾ ಘಟಕವನ್ನು
ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಸುಮಾರು 1 ಲಕ್ಷ 50,000 ಸಾವಿರ ರೂಪಾಯಿಗಳಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುನೇರಾ ಮ ಸಂಗೊಳ್ಳಿ ಉಪಾಧ್ಯಕ್ಷರಾದ ಸಂತೋಷ್ ಚಂದ್ರಶೇಖರ್ ಹಂಜಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಗ್ರಾಮ ಪಂಚಾಯತಿಯ ಪಿ ಡಿ ಓ ಆರ್ ಜಿ ರೆಡ್ಡಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.