ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದಲ್ಲಿ ಮೂಡಲಗಿ,ಶಿವಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿರುವ ವಿಡಿಯೋ ವೈರಲ್ ಬೆನ್ನಲ್ಲೇಗ್ರಾಮಸ್ಥರಿಗೆ ಅರಣ್ಯ ಇಲಾಖೆ, ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಶಿವಾಪುರ ಗ್ರಾಮದ ಕಬ್ಬು, ಮೆಕ್ಕಜೋಳ ಹಾಗೂ ಖಾಲಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿರುವ ವೈರಲ್ ಆಗಿದೆ. ಅಲ್ಲದೆ, ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ.
ಈ ಹಿನ್ನೆಲೆ ಅರಣ್ಯ ಇಲಾಖೆ, ಪೊಲೀಸರು ಚಿರತೆ ಹಿಡಿಯಲು ಕಾರ್ಯಚರಣೆ ಕೈಗೊಂಡಿದ್ದಾರೆ. ಅಲ್ಲದೆ, ಚಿರತೆ ಓಡಾಡಿರುವ ಪ್ರದೇಶಗಳಲ್ಲಿ ಜನರು ಓಡಾಡದಂತೆ,
ಕೃಷಿ ಜಮೀನುಗಳಲ್ಲಿ ಕೆಲಸ ಮಾಡದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.