ಬೆಳಗಾವಿ: ಅಥಣಿ ತಾಲೂಕಿನ ಕೊಕಟನೂರ ಪಶುವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುದಾನ ನೀಡದೆ ತಡೆಹಿಡಿದ್ದರು. ಇದೀಗ ಅದೇ ಕಾಲೇಜು ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ವಾಗ್ದಾಳಿ ನಡೆಸಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಕಟನೂರ ಪಶುವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಹಾಗೂ ಅಥಣಿ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಆರಂಭಿಸಲು ಶ್ರಮಿಸಿದ್ದು ನಾನು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅ.೧೧ರಂದು ಉದ್ಘಾಟನೆ ಮಾಡುತ್ತಿರುವ ಯೋಜನೆಗಳು ಎಲ್ಲ ಬಿಜೆಪಿ ಸರ್ಕಾರದ ಅವಽಯಲ್ಲಿ ಕೈಗೊಂಡಿರುವುದು ಎಂಬುದು ಹಾಲಿ ಶಾಸಕರು ಮರೆತು ಬಿಟ್ಟಿದ್ದಾರೆ ಎಂದು ಟೀಕಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಬಸವರಾಜ ಬೊಮ್ಮಾಯಿ ಅವರ ಅಽಕಾರದ ಅವಽಯಲ್ಲಿ ಅಥಣಿ ಪಟ್ಟಣ, ತಾಲೂಕಿನ ವಿವಿಧ ಭಾಗಗಳಲ್ಲಿ ನೂರಾರು ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಘೋಷಣೆ ಮಾಡಿ ಟೆಂಡರ್ ಕರೆಯಲಾಗಿತ್ತು. ಆ ಕಾಮಗಾರಿಗಳನ್ನು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುತ್ತಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದರು.
ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಝೀರಲಿ ಮಾತನಾಡಿ, ಅಥಣಿಯ ಕೊಕಟನೂರನಲ್ಲಿ ಪಶುವೈದ್ಯಕೀಯ ಕಾಲೇಜನ್ನು ಉದ್ಘಾಟನೆಗೆ ಆಗಮಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಸಂತೋಷ. ಆದರೆ ಕಳೆದ ೨೦೦೯ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. ಈ ಭಾಗದಲ್ಲಿ ಪಶುಗಳು ಹೆಚ್ಚಿರುವ ಉದ್ದೇಶದಿಂದ ಬಾವುರಾವ ದೇಶಪಾಂಡೆ ಅವರ ಸವಿ ನೆನಪಿಗಾಗಿ ಪಶುವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಕೂಗು ಇತ್ತು. ೨೦೧೩ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಇದಕ್ಕೆ ಅನುದಾನ ನೀಡಲಿಲ್ಲ. ಆದರೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾದ ಬಳಿಕ ಈ ವೈದ್ಯಕೀಯ ಕಾಲೇಜಿಗೆ ಅನುದಾನ ನೀಡಿ ಅದಕ್ಕೆ ಬೇಕಾಗುವ ವ್ಯವಸ್ಥೆ ಮಾಡಿ ಒಂದೂವರೆ ಎಕರೆಯಲ್ಲಿ ಪಶು ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಶ್ರೇಯ ಬಿಜೆಪಿಗೆ ಸಲ್ಲುತ್ತದೆ ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಅನಿಲ್ ಬೆನಕೆ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ಇತರರಿದ್ದರು





