ಬೆಳಗಾವಿ ಧಾರವಾಡ ಜಿಲ್ಲೆಯ ಹೈಕೋರ್ಟ್ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಬಳಿ ಸಿಲಿಂಡರ್ ಟ್ಯಾಂಕರ್ ಅಪಘಾತವಾಗಿರುವ ಹಿನ್ನೆಲೆಯಲ್ಲಿ
ಬೆಳಗಾವಿಯಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗುತ್ತಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಮನವಿ ಮಾಡಿಕೊಂಡಿದ್ದಾರೆ.
ಧಾರವಾಡದ ಹೈಕೋರ್ಟ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲಿಂಡರ್ ಟ್ಯಾಂಕರ್ ಅಪಘಾತವಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಬೆಳಗಾವಿಯಿಂದ ಧಾರವಾಡಕ್ಕೆ ಪ್ರಯಾಣಿಸುವ ವಾಹನಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗುತ್ತಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸಬೇಕೆಂದು ಎಸ್ಪಿ ಸಂಜೀವ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ