ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎಂಬ ವಿಚಾರಕ್ಕೆ ಸ್ವತಃ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಇವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನಮ್ಮ ನಡುವೆ ಯಾವುದೇ ಕೋಲ್ಡ್ ವಾರ್ ಇಲ್ಲ. ಬೆಳಗಾವಿಯ ಎಲ್ಲ ನಾಯಕರು ಕಾರ್ಯಕರ್ತರು ಒಂದೇ ಆಗಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಕಾಲದಲ್ಲಿ ವಿರೋಧ ಪಕ್ಷದಲ್ಲಿದ್ದು ನಾವೇ ಕೊರೊನಾದಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇವು.
ಈಗ ನಮ್ಮ ಸರಕಾರವೇ ಅಧಿಕಾರದಲ್ಲಿದೆ. ಈಗ ಆ ತನಿಖೆ ಮಾಡುವುದು ಸೂಕ್ತ. ಈಗಾಗಲೇ ಸರಕಾರದ ವಿವಿಧ ತನಿಖಾ ಸಂಸ್ಥೆಗಳ ಅಧಿಕಾರಿಗಳಿಂದ ತನಿಖೆ ನಡೆಸಿ ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ. ಸುಧಾಕರ ಕಾಂಗ್ರೆಸ್ ಬರುತ್ತಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಸುಧಾಕರ ಅವರು ಕಾಂಗ್ರೆಸ್ ಗೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ.
ಆದರೆ ಕೊರೊನಾ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರದ ಕುರಿತು ತನಿಖೆ ನಡೆಸುವುದು ಖಚಿತ. ಸುಧಾಕರ ಅವರು ಈಗ ಶಾಸಕರಲ್ಲ. ಸರಕಾರ ಬಿಳಿಸುವಷ್ಟು ಅಧಿಕಾರ ಇಲ್ಲ. ಅವರ ಮೇಲೆ ಆರೋಪ ಇದೆ. ಅದು ತನಿಖೆ ಆಗಬೇಕಷ್ಟೆ ಎಂದರು.