ಅಪಾರ್ಟ್‌ಮೆಂಟ್‌ ಮೇಲಿಂದ ಬಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

Share the Post Now

ಹತ್ತು ಹಲವು ಅನುಮಾನ ಮೂಡಿಸಿದ ಸಾವು

ಬೆಂಗಳೂರು:  ಕ್ಲಾಸಿಕ್ ಅಪಾರ್ಟ್‌ಮೆಂಟ್‌ನಲ್ಲಿ  ಬಿದ್ದು  10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬೆಳ್ಳಂದೂರಿನ  ನಡೆದಿದೆ. 14 ವರ್ಷದ ಜೆಸ್ಸಿಕಾ ಮೃತ ಬಾಲಕಿ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಜೆಸ್ಸಿಕಾ ಇಂದು ಬೆಳಗ್ಗೆ ಶಾಲೆಗೆ ಹೋಗಿ ವಾಪಸ್ ಮನೆಗೆ ಬಂದಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್‌ಗೆ ಬಂದ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಜೆಸ್ಸಿಕಾ ತಂದೆ ಸಾಫ್ಟ್‌ವೇರ್ ಎಂಜಿನಿಯರ್, ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ವಾಪಸ್ ಬಂದಿರೋದು ಪೋಷಕರಿಗೆ ತಿಳಿದಿಲ್ಲ. ಸ್ಕೂಲ್‌ ಟೀಚರ್ ಜೆಸ್ಸಿಕಾ ತಾಯಿಗೆ ಕರೆ ಮಾಡಿ ನಿಮ್ಮ ಮಗಳು ಇವತ್ತು ಶಾಲೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ಕೂಡಲೇ ಪೋಷಕರು ಪರಿಶೀಲನೆ ಮಾಡಿದಾಗ ಮಗಳು ಸಾವನ್ನಪ್ಪಿರೋ ವಿಚಾರ ಗೊತ್ತಾಗಿದೆ.

ವಿದ್ಯಾರ್ಥಿನಿ ಸಾವಿನ ಬಗ್ಗೆ ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಜೆಸ್ಸಿಕಾ ಮನೆಯಲ್ಲಿ ಅಪ್ಪ, ಅಮ್ಮ, ಅಕ್ಕ, ಎಲ್ಲರು ಕೆಲಸಕ್ಕೆ ಹೋಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ. ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರ್ತಾ ಇದ್ದಳು ಅನ್ನೋ ಅನುಮಾನವಿದೆ. ಬೆಳ್ಳಂದೂರು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *

error: Content is protected !!