ಮೈಸೂರಿನಲ್ಲಿ ಗ್ರಹಾಲಕ್ಷ್ಮಿ ಯೋಜನೆ ಉದ್ಘಾಟನೆಯಲ್ಲಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಹೋದರ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಅಧಿಕಾರಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು
ಪ್ರತಿ ವರ್ಷ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಬಾರಿಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ನಿಮಿತ್ಯ
ಮೈಸೂರಿನಲ್ಲಿ ಇರಬೇಕಾದ ಅನಿವಾರ್ಯತೆಯಿಂದಾಗಿ ಮೈಸೂರಿನಲ್ಲಿಯೇ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ
ಹಾಗೂ ಹಿರಿಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಸಾಂಕೇತಿಕವಾಗಿ ರಕ್ಷಾ ಬಂಧನ ಆಚರಿಸಿದರು.