ವರದಿ: ಸಂಗಮೇಶ ಹಿರೇಮಠ.
ಮುಗಳಖೋಡ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಶ್ರೀ.ಚ.ವಿ.ವ ಸಂಘದ ಬಿ.ಎನ್.ಕೆ. ಪ್ರೌಢಶಾಲೆಯ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು.
ವೈದ್ಯಾಧಿಕಾರಿಗಳಾದ ಡಾಕ್ಟರ್ ಗಜಾನನ ಕುಲಕರ್ಣಿ ಅವರ ಉಪಸ್ಥಿತಿಯಲ್ಲಿ, ಶಶಿಕಲಾ ಚೋಗಲಾ ಹಾಗೂ ಸಿಬ್ಬಂದಿ ವರ್ಗದವರ ಸಹಕಾರದಿಂದ ಬಿ.ಎನ್.ಕೆ ಪ್ರೌಢ ಶಾಲೆಯ ಒಟ್ಟು 590 ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ಮಾಡಿ ಆರೋಗ್ಯದ ಬೆಳವಣಿಗೆಯನ್ನು ಪರಿಶೀಲಿಸಿ ಆರೋಗ್ಯದಲ್ಲಿ ಕುಂಟಿತಗೊಂಡ ಹಾಗೂ ಬೇರೆ ಬೇರೆ ಸಮಸ್ಯೆಗಳಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ರಾಯಬಾಗ ತಾಲೂಕಾ ಆಸ್ಪತ್ರೆ ಸಂಪರ್ಕಿಸಲು ಮಾರ್ಗದರ್ಶನ ನೀಡಿದರು.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಕಣ್ಣಿನ ಸಮಸ್ಯೆ ಇವರು ವಿದ್ಯಾರ್ಥಿಗಳಿಗೆ ಕನ್ನಡಕವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಡಾ. ಗಜಾನನ ಕುಲಕರ್ಣಿ, ಶಶಿಕಲಾ ಚೋಗಲಾ, ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಸ್.ಮದಾಳೆ, ದೈಹಿಕ ಶಿಕ್ಷಕ ಪಿ.ಎಸ್.ಮಗದುಮ್ ಸೇರಿದಂತೆ ಶಾಲೆಯ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಎಲ್ಲ ಸಿಬ್ಬಂದಿಯವರು ಉಪಸ್ಥಿತರಿದ್ದರು.