ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಕಲುಷಿತ ಆಹಾರ ಸೇವೆನೆಯಿಂದ ಜನರು ಅಸ್ವಸ್ಥರಾದ ಪ್ರಕರಣ ಹಿನ್ನಲೆಯಲ್ಲಿ ಚಿಕ್ಕೋಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ಜನರ ಆರೋಗ್ಯವನ್ನು ದೆಹಲಿ ಪ್ರತಿನಿಧಿ ವಿಧಾನ ಪರಿಷತ ಸದಸ್ಯ ಪ್ರಕಾಶ ಹುಕ್ಕೇರಿ ವಿಚಾರಿಸಿದರು.
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಮದುವೆಯ ಸಮಾರಂಭದಲ್ಲಿ ಕಲುಷಿತ ಆಹಾರ ಸೇವನೆಯಿಂದ ಸುಮಾರು 250 ಕ್ಕಿಂತ ಹೆಚ್ಚು ಜನರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಈ ಹಿನ್ನಲೆಯಲ್ಲಿ
ದೆಹಲಿ ಪ್ರತಿನಿಧಿ,ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಆಸ್ಪತ್ರೆಯಲ್ಲಿನ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.ಈ ಸಂಧರ್ಭದಲ್ಲಿ ಜಿಲ್ಲಾ ಅಪರ ಆರೋಗ್ಯಧಿಕಾರಿ ಎಸ್ ಎಸ್ ಗಡಾದ, ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು