10 ದಿನಗಳ ದ ಸೋಕ್ ಮಾರ್ಕೆಟ್ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ
ಬೆಂಗಳೂರು ಸೆಪ್ಟಂಬರ್ 01: ರಾಜ್ಯದಲ್ಲಿ ಕಲೆ ಮತ್ತು ಸಂಸ್ಕೃತಿಗೆ ಪ್ರೋತ್ಸಾಹ ನೀಡುವಲ್ಲಿ ಮೊದಲಿನಿಂದಲೂ ಕರ್ನಾಟಕ ಚಿತ್ರಕಲಾ ಪರಿಷತ್ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ ಎಂದು ವಸತಿ, ಅಲ್ಪ ಸಂಖ್ಯಾತ ಮತ್ತು ವಕ್ಫ್ ಸಚಿವರಾದ ಶ್ರೀ ಬಿ. ಝೆಡ್ ಜಮೀರ್ ಅಹ್ಮದ್ ಖಾನ್ ಹೇಳಿದರು.
ಇಂದು ಗ್ರಾಂಡ್ ಪ್ಲಿಯಾ ಮಾರ್ಕೆಟ್ ಸಂಸ್ಥೆಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಯೋಜಿಸಲಾಗಿರುವ ದ ಸೋಕ್ ಮಾರ್ಕೆಟ್ ಕರಕುಶಲ ಮಾರಾಟ ಮತ್ತು ಪ್ರದರ್ಶನ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಲೆಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವಲ್ಲಿ ಚಿತ್ರಕಲಾ ಪರಿಷತ್ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಇಂತಹ ಸಂಸ್ಥೆಯ ಆವರಣದಲ್ಲಿ ಕಲಾವಿದರಿಗೆ ಹಾಗೂ ಅವರ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉತ್ತಮ ಕಾರ್ಯಕ್ರಮವಾಗಿದೆ. ಇದರಿಂದ ಕಲಾವಿದರಿಗೆ ಉತ್ತಮ ವೇದಿಕೆ ಒದಗಿಸಿ ದಂತೆ ಆಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್, ಕಾಂಗ್ರೆಸ್ ಹಿರಿಯ ಮುಖಂಡರಾದ ಜಿ. ಎ ಬಾವ, ಕಾರ್ಯಕ್ರಮದ ಆಯೋಜಕ ರಾದ ಅಫ್ತಾಬ್ ಮತ್ತಿತರರು ಉಪಸ್ಥಿತರಿದ್ದರು.