ವರದಿ ಪ್ರಕಾಶ ಚ ಕಂಬಾರ
ಬೆಳಗಾವಿ.ಮುಗಳಖೋಡ: ಪಟ್ಟಣದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ರೈನೋಬೋ ಸೆಂಟ್ರಲ್ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಈ ಸಮಾರಂಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಡಾ ಸಿ ಬಿ ಕುಲಿಗೋಡ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀ ಕೃಷ್ಣನ ಪವಾಡ ಕುರಿತು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೫೦ ಕ್ಕೂ ಹೆಚ್ಚು ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಎಲ್ಲರ ಗಮನ ಸೆಳೆದರು.
ಈ ಸಮಾರಂಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಪ್ರಕಾಶ ಆದಪ್ಪಗೋಳ, ಮಯೂರ ಕುರಾಡೆ, ಪ್ರೊ ಪ್ರಕಾಶ ಕಂಬಾರ, ಎಸ್.ಎಸ್.ಮಧಾಳೆ, ಬಿ.ಎ.ಕೊಪ್ಪದ, ಪ್ರಾಚಾರ್ಯರಾದ ರಮೇಶ್ ಎಸ್.ಜಿ. ಮತ್ತು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎಸ್.ಜಿ.ಯರಗಟ್ಟಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶ್ರವಣಕುಮಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.