ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು? ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಪ್ರತಿ ಬಾರಿ ದಸರಾಗೆ 1700-2000 ಪೊಲೀಸರ ನಿಯೋಜಿಸಲಾಗ್ತಿತ್ತು. ತುರ್ತಾಗಿ ಇಂದು ಬೆಳಗ್ಗೆ 9 ಗಂಟೆಗೆ 1568 ಪೊಲೀಸರ ನಿಯೋಜನೆ ಮಾಡಲಾಗಿದೆ. ಜೊತೆಗೆ 40 CAR ತುಕಡಿಗಳು, 30 KSRP ತುಕಡಿಗಳ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ, KRS ಪೊಲೀಸರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.