ಬೆಂಗಳೂರು :ಖಡಕ್ ಪೊಲೀಸ್ ಅಧಿಕಾರಿಯೆಂದೇ ಹೆಸರುವಾಸಿಯಾಗಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಡಿಫರೆಂಟ್ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫ್ಯಾಶನ್ ಡಿಸೈನರ್ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್ ಭಾರ್ಗವಿ ಕೆ.ಆರ್ ಅವರು ಕ್ಯಾಮಾರಾದಲ್ಲಿ ರೂಪಾ ಅವರ ವಿಶೇಷ ರೀತಿಯ ಪೋಟೋ ಶೂಟ್ ಮಾಡಿಸಿಕೊಂಡಿದ್ದಿ, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ’ ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ. ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದಾರೆ.
‘ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ’ ಎಂದು ಬರೆದುಕೊಂಡಿದ್ದಾರೆ. ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.