ಹಳ್ಳೂರ.
ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಪ್ರತೀ ವರ್ಷ ದಂತೆ ಈ ವರ್ಷವೂ ಕೂಡಾ ಹಳ್ಳೂರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಬ ಆರತಿ ವಿವಿಧ ವಾದ್ಯಮೇಳದೊಂದಿಗೆ ಆಯ್ಯಪ್ಪ ಸ್ವಾಮಿ ಭಾವಚಿತ್ರದೊಂದಿಗೆ ಪಲ್ಲಕ್ಕಿ ಉತ್ಸವದ ಮೆರವಣಿಗೆ ಜರುಗುವುದು.
ಸಾಯಂಕಾಲ ಅಯ್ಯಪ್ಪ ಸ್ವಾಮಿ ಮಹಾಪೂಜೆ ನಡೆಯುವುದು. ಈ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ಬಬಲಾದಿ ಶ್ರೀ ಸಿದ್ದರಾಮಯ್ಯ ಹೊಳಿಮಠ ಮಹಾಸ್ವಾಮಿಗಳು. ಹಾಗೂ ಕಾನಟ್ಟಿ ಶ್ರೀ ಬಸವಾನಂದ ಮಹಾಸ್ವಾಮಿಗಳು. ಮತ್ತು ಶಿವಾಪೂರ ಶ್ರೀ ಅಡವಿಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಮಹಾಸ್ವಾಮಿಗಳಿಂದ ಆಶೀರ್ವಚನ ನೀಡುವರು. ಗ್ರಾಮದ ಸುತ್ತ ಮುತ್ತಲಿನ ಗುರು ಸ್ವಾಮಿಗಳು ಆಯ್ಯಪ್ಪ ಸ್ವಾಮಿ ಮಾಲಾದಾರಿಗಳು ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುಣಿತರಾಗಬೇಕೆಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.