ಬೆಳಗಾವಿ ಜಿಲ್ಲೆಯ ಕುಡಚಿ ಮತಕ್ಷೇತ್ರದ ಹಾರೂಗೇರಿ ಪಟ್ಟಣದ ಪುರಸಭೆ ಆವರಣದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ವತಿಯಿಂದ ಬ್ರಹತ್ ಸಮಾವೇಶ ಜರಗಿತು
ಕುಡಚಿ ಮತಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಆಗಬೇಕಾಗಿದೆ ನಮ್ಮ ತಂದೆ ಸತೀಶ್ ಜಾರಕಿಹೊಳಿ ಅವರು ಲೋಕೋಪಯೋಗಿ ಇಲಾಖೆಯಿಂದ ಸಾಧ್ಯವಾದಷ್ಟು ಅನುದಾನವನ್ನು ನೀಡುತ್ತಾ ಬಂದಿದ್ದಾರೆ ನಮ್ಮ ಕಾಂಗ್ರೆಸ್ ಪಕ್ಷ ನೆಹರು ಇಂದಿರಾಗಾಂಧಿ ಕಾಲದಿಂದಲೂ ಬಡವರ ದಿನದಲಿತರ ಕೂಲಿ ಕಾರ್ಮಿಕರ ಜೀವನದ ಬಗ್ಗೆ ಅಪಾರವಾದಂತ ಕಾಳಜಿಯನ್ನು ಹೊಂದಿರುವಂತಹ ಪಕ್ಷ ನಮ್ಮ ರಾಜ್ಯದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆಗೆ ಸಿದ್ಧರಿದ್ದೇವೆ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಬೇಕಾದರೆ ಸ್ಥಳೀಯ ಶಾಸಕರ ಜೊತೆ ಚರ್ಚೆ ಮಾಡುತ್ತೇನೆ ಮುಂದಿನ ದಿನಮಾನದಲ್ಲಿ ಮಹಿಳೆಯರಿಗೆ ಸಾಹಿತಿಗಳಿಗೆ ಕಲಾವಿದರಿಗೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಮಾಡುತ್ತೇವೆ ಹಾಗಾಗಿ ನಿಮ್ಮ ಮನೆಯ ಮಗಳಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ನೀವೆಲ್ಲರೂ ಬೆಂಬಲ ವ್ಯಕ್ತಪಡಿಸಿಬೇಕು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಬೇಕೆಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಕು.ಪ್ರಿಯಾಂಕ ಅವರು ಮತಯಾಚನೆ ಮಾಡಿದರು
ಶಾಸಕ ಮಹೇಂದ್ರ ತಮ್ಮನವರ ಮಾತನಾಡಿ ನಮ್ಮ ಕುಡಚಿ ಮತಕ್ಷೇತ್ರದಿಂದ ನನ್ನನ್ನು 26,000 ಕ್ಕಿಂತ ಹೆಚ್ಚಿನ ಮತಗಳಿಂದ ಗೆಲ್ಸಿದ್ದೀರಿ ಹಾಗಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ನೀವು ಮತವನ್ನು ಹಾಕಬೇಕು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿಯನ್ನು ಅತಿ ಹೆಚ್ಚಿನ ಮತಗಳಿಂದ ಆರಿಸಿ ತರಬೇಕೆಂದು ವಿನಂತಿ ಮಾಡಿದರು ಇದೇ ಸಂದರ್ಭದಲ್ಲಿ ಅಥಣಿ ಮತಕ್ಷೇತ್ರದ ಶಾಸಕರಾದ ಲಕ್ಷ್ಮಣ ಸವದಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಣರಾವ್ ಚಿಂಗಳೇ ಮಾತನಾಡಿದರು
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಶಾಸಕ ಮಹೇಂದ್ರ ತಮ್ಮಣ್ಣವರ ಗಜಾನನ ಮಂಗಸೂಳಿ ಮಾಜಿ ಸಚಿವ ವೀರಕುಮಾರ ಪಾಟೀಲ್ ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವನಾಥ್ ವೈದ್ಯ ದಸ್ತಿಗೀರ ಕಾಗವಾಡೆ ಸಿಬಿ ಕುಲಗೋಡೆ ಎನ್ ಎಸ್ ಚೌಗಲಾ ಭೀಮು ಬದ್ನಿಕಾಯಿ ಅರ್ಜುನ್ ನಾಯಿಕವಾಡಿ ನಿರ್ಮಲಾ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು






