ಬೆಳಗಾವಿ.
ಮೂಡಲಗಿ.ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಯನ್ಸ್ ಎಜುಕೇಶನ್ ಸೊಸೈಟಿ ಮೂಡಲಗಿಯ ವಿ ಬಿ ಸೋನವಾಲ್ಕರ್ ಮೆಮೋರಿಯಲ್ ಆಂಗ್ಲ ಪ್ರೌಢ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.
ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಜ್ಯುವೆರಿಯ ಶೇಖ(88.64%) ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ, ಅಪ್ಪು ಅಂಗಡಿ(85.60%) ಅಂಕ ಪಡೆಯುವ ಮೂಲಕ ಶಾಲೆಗೆ ದ್ವಿತೀಯ. ಶ್ರೇಯಾಂಶ ಸಪ್ತಸಾಗರ (85.44%) ಶಾಲೆಗೆ ತೃತೀಯ ಸ್ಥಾನವನ್ನು ಅಲಂಕರಿಸಿದ್ದಾರೆ . ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುನೀತಾ ಹೊಸೂರ ಮತ್ತು ನಿರ್ದೇಶಕರು ಮೂಖ್ಯೋಪಾಧ್ಯಾಯರು, ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.