ಸಮಾನತೆಯನ್ನು ಸಾರಿದ ಶ್ರೇಷ್ಠ ಗ್ರಂಥ ಸಂವಿಧಾನ : ದುರ್ಗಪ್ಪ ತಳವಾರ

Share the Post Now

ನಗರದ ಗುರು ವಿವೇಕಾನಂದ ವಿವಿಧ ಉದ್ದೇಶಗಳ ಸಹಕಾರ ಸಂಘದ ಕಛೇರಿಯಲ್ಲಿ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದುರ್ಗಪ್ಪ ತಳವಾರ ನಮ್ಮ ಸಂವಿಧಾನವು ಕೇವಲ ಕಾನೂನಿನ ದಾಖಲೆಯನ್ನು ಒಳಗೊಂಡ ಪುಸ್ತಕವಲ್ಲ, ಇದು ಸಮಾಜದ ಎಲ್ಲಾ ವರ್ಗಗಳ ಸ್ವಾತಂತ್ರ‍್ಯವನ್ನು ರಕ್ಷಿಸುವ ಮತ್ತು ಜಾತಿ, ಮತ, ಲಿಂಗ, ಪ್ರದೇಶ, ಪಂಥ ಅಥವಾ ಭಾಷೆಯ ಆಧಾರದ ಮೇಲೆ ತಾರತಮ್ಯ ಮಾಡದೆ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕನ್ನು, ಸಮಾನತೆಯನ್ನು ನೀಡಿದ  ಪ್ರಮುಖ ಸಾಧನವಾಗಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಾ. ನಾರಾಯಣ ನಾಯ್ಕ ಅವರು ನಮ್ಮ ಸಂವಿಧಾನವು  ಜನರ ಪ್ರಗತಿಯೊಂದಿಗೆ ರಾಷ್ಟ್ರವು ಪ್ರಗತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಸಾಗಲು ದಾರಿದೀಪವಾಗಿದೆ. ದೂರದೃಷ್ಟಿ ಹೊಂದಿದ್ದ ನಮ್ಮ ಸಂವಿಧಾನದ ಶಿಲ್ಪಿಗಳು ಭಾರತದ ರಾಷ್ಟ್ರೀಯತೆಯ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದರು ಎಂಬುದನ್ನು ಇದು ತೋರಿಸುತ್ತದೆ. ಕಳೆದ ಏಳು ದಶಕಗಳಿಂದ ಜಾರಿಯಲ್ಲಿರುವ ಈ ಸಂವಿಧಾನದ ಮೂಲಕ ನಾವು ಅನೇಕ ಮೈಲಿಗಲ್ಲುಗಳನ್ನು ಸಾಧಿಸಿದ್ದೇವೆ. ವಿಶ್ವದ ಅತಿ ದೊಡ್ಡ ಮತ್ತು ಯಶಸ್ವಿ ಪ್ರಜಾಪ್ರಭುತ್ವ ಎಂಬ ಗೌರವ ನಮಗಿದೆ. ಎಪ್ಪತ್ತೆöÊದರ ಈ ಸಂದರ್ಭದಲ್ಲಿ ನಮ್ಮ ಸಂವಿಧಾನದ ಆಶಯವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆಯೇ ಎಂಬುದನ್ನು ಅವಲೋಕಿಸಬೇಕಾಗುತ್ತದೆ. ಸಂವಿಧಾನವನ್ನು ಪ್ರತಿಯೊಬ್ಬರು ಪರಿಪೂರ್ಣವಾಗಿ ಅನುಸರಿಸಿದಲ್ಲಿ ದೇಶದ ಭವಿಷ್ಯವು ಉಜ್ವಲವಾಗುತ್ತದೆ ಎಂದರು.


ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಅಂಜನಕುಮಾರ ಗಂಡಗುದರಿ, ಆನಂದ ಶೆಟ್ಟಿ, ಗಣೇಶ ನಾಯಕ, ರಾಜೇಶ ಗೌಡ, ಭಾರತಿ ಶೆಟ್ಟಿಗಾರ, ರೂಪಾ ಮಗದುಮ್, ಸಂಘದ ಸಿಬ್ಬಂದಿಗಳು ಮತ್ತು ಪಿಗ್ಮಿ ಸಂಗ್ರಹಕಾರರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ವಿಶಾಲ ಪಾಟೀಲ ಸ್ವಾಗತಿಸಿದರು, ಅಶ್ವಿನಿ ಮೂಲ್ಯ ನಿರೂಪಿಸಿದರು, ರಘುನಾಥ ಗಾವಡೆ  ವಂದಿಸಿದರು.

Leave a Comment

Your email address will not be published. Required fields are marked *

error: Content is protected !!