ಬೆಳಗಾವಿ : ನಗರದ ಹೃದಯಭಾಗದಲ್ಲಿರುವ ಕೋಟೆ ಕೆರೆಯಲ್ಲಿ ಮಹಿಳೆಯೊಬ್ಬರು ಮುಳುಗುತ್ತಿದ್ದ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.
ಕೋಟೆ ಕೆರೆಯಲ್ಲಿ ಮಹಿಳೆ ಮುಳುಗುತ್ತಿರುವುದನ್ನು ಗಮನಿಸಿದ ಕರ್ತವ್ಯ ನಿರತ ಉತ್ತರ ಸಂಚಾರಿ ಠಾಣೆಯ ಪೊಲೀಸ ಕಾನ್ಸ್ಟೇಬಲ್ ಕಾಶಿನಾಥ್ ಈರಗಾರ್ ರವರು ತಮ್ಮ ಜೀವವನ್ನು ಪಣಕ್ಕಿಟ್ಟು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.