ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲೋಳಿ ವಲಯದಿಂದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಜರುಗಿತು

Share the Post Now

ಹಳ್ಳೂರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲೋಳಿ ವಲಯದ 9 ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ಕಲ್ಲೋಳಿಯ ಸಿದ್ಧಾರೂಢ ಮಠದ ಆವರಣದಲ್ಲಿ ಸೋಮವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಾಜು ನಾಯಕ್ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿ. ಒಕ್ಕೂಟದ ಧೈರ್ಯ ಉದ್ದೇಶ. ಸಭೆ ನಡೆಯುವ ವಿಧಾನದ ಬಗ್ಗೆ ತರಬೇತಿ ನೀಡಿದರು. ಸಂಘದ ವಾರದ ಸಭೆಯ ಮಹತ್ವ.

ಸಭೆ ನಡೆಯುವ ವಿಧಾನ.ಪದಾಧಿಕಾರಿಗಳು ವಾರದ ಸಭೆಯಲ್ಲಿ ಭಾಗವಹಿಸುವ ಉದ್ದೇಶಗಳ ಬಗ್ಗೆ ತರಬೇತಿ ನೀಡಿದರು. ಕನ್ನಡ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಾಗೂ ಪತ್ರಕರ್ತರಾದ  ಮುರಿಗೆಪ್ಪ ಮಾಲಗಾರ ಮಾತನಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಹಾಗೂ ಪೂಜ್ಯರ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಹಂಚಿಕೊಂಡರು. 

     ಮೇಲ್ವಿಚಾರಕರಾದ ಮಹೇಶ್ ಮಾತನಾಡಿ  ಪಾರದರ್ಶಕ ವ್ಯವಹಾರಕ್ಕೆ ದಾಖಲಿಕರಣದ ಮಹತ್ವ. ವಾರದ ಸಭೆ ಹಾಗೂ ಒಕ್ಕೂಟ ಸಭೆಗಳ  ದಾಖಲಾತಿಗಳ ನಿರ್ವಹಣೆಯ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಿದರು.                         ವಲಯದ ಮೇಲ್ವಿಚಾರಕರಾದ ಶ್ರೀಮತಿ ಶ್ರುತಿ ಇವರು ಕಾರ್ಯಕ್ರಮದ ನಿರೂಪಣೆಯೊಂದಿಗೆ ಉಪ ಸಮಿತಿ ಹಾಗೂ ಅಜೆಂಡ ಬಗ್ಗೆ ಮಾಹಿತಿ ನೀಡಿದರು ಹಾಗೂ 9 ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು  ಉಪಸ್ಥಿರಿದ್ದರು. ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಶೋಭಾ ಹಿರೇಮಠ ಸ್ವಾಗತಿಸಿ,ವಂದಿಸಿದರು. 

              ಈ ಕಾರ್ಯಕ್ರಮದಲ್ಲಿ ವಲಯದ 45 ಕ್ಕೂ ಹೆಚ್ಚು ಜನ ಒಕ್ಕೂಟದ ಪದಾಧಿಕಾರಿಗಳು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!