220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಜಾರಕಿಹೊಳಿ
ಬೆಳಗಾವಿ ನಗರವು ರಾಜ್ಯದಲ್ಲಿ ಶರವೇಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಉದ್ಯಮ, ವಸತಿ ಸೇರಿದಂತೆ ಎಲ್ಲ ರೀತಿಯಿಂದಲೂ ಬೆಳವಣಿಗೆಯಾಗುತ್ತಿದ್ದು, ಇದಕ್ಕೆ ಪೂರಕವಾಗಿ ನೀರು-ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯವನ್ನು ಒದಗಿಸಲು ಸರಕಾರ ಬದ್ಧವಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಸೋಮವಾರ (ಆ.7) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ […]