ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಹತ್ಯೆಗೈಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃತ್ಯದಲ್ಲಿ ಮೂರು ಜನ ಭಾಗಿಯಾಗಿರುವ ಶಂಕೆ ಇದೆ. ಹತ್ಯೆ ಬಳಿಕ ಕಿಡಿಗೇಡಿಗಳು ಪರಾರಿಯಾಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಯುವಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಯುವಕನನ್ನು ಸಂಚು ರೂಪಿಸಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.