ಬೆಳಗಾವಿ: ಜಿಲ್ಲೆಯಲ್ಲಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಿಯುಸಿ ಪ್ರಥಮ ಮತ್ತು ದ್ವಿತೀಯ ದರ್ಜೆ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪಟಾಪ್‌ಗಳನ್ನು ನೀಡಲಾಗುತ್ತಿದೆ. ಕಾರ್ಮಿಕ ಅಧಿಕಾರಿಗಳು ಉಪ ವಿಭಾಗ 1 ಮತ್ತು 2, ಬೆಳಗಾವಿ ಅವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಅರ್ಜಿ ನಮೂನೆಯನ್ನು ತಾವು ನೊಂದಣಿ ಮಾಡಿಸಿದ ಕಚೇರಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆ.13, 2023 ರಂದು ಕೊನೆಯ ದಿನವಾಗಿರುತ್ತದೆ, ಬಳಿಕ ಬರುವ ಅರ್ಜಿಗಳನ್ನು ಯಾವುದೇಕಾರಣಕ್ಕೂ ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಛೇರಿ, ಕಾರ್ಮಿಕ ಭವನ, ಐ.ಟಿ.ಐ ಕಾಲೇಜು ಆವರಣ ಮಜಗಾಂವ ರಸ್ತೆ, ಉದ್ಯಮಬಾಗ, ಬೆಳಗಾವಿ-590008 ಅಥವಾ ದೂರವಾಣಿ ಸಂಖ್ಯೆ: 9740957911, 9880935964 ಗೆ ಸಂಪಿರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.