ಬೆಳಗಾವಿ, ಕಾಗವಾಡ
ವರದಿ :ಸಚಿನ ಕಾಂಬಳೆ
ಕಾಗವಾಡ :ಕೆಂಪವಾಡದ ಶಾಸಕರ ಕೇಂದ್ರ ಕಚೇರಿಯ ಮೇಲೆ ಪಕ್ಷದ ಪದಾಧಿಕಾರಿಗಳೊಂದಿಗೆ ಕಾಗವಾಡ ಮತಕ್ಷೇತದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲಅವರು ಪಕ್ಷದ ಧ್ವಜಾರೋಹಣ ನೆರವೇರಿಸಿ, ಚಾಲನೆ ನೀಡಿದರು
ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಕುರಿತಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ, ಬೂತ್ ಸಮಿತಿಗಳ ರಚನೆ, ಪೇಜ್ ಪ್ರಮುಖರ ನಿಯುಕ್ತಿ, ಕಾರ್ಯಕರ್ತರ ಮನೆಗಳ ಮೇಲೆ ಧ್ವಜಾರೋಹಣ ನೆರವೇರಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಡಾ. ರಾಜೇಶ್ ನೇರ್ಲಿ, ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು, ಮಂಡಲ ಅಧ್ಯಕ್ಷರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪದಾಧಿಕಾರಿಗಳು, ವಕ್ತಾರರು, ಮತ್ತಿತರರ ಮುಖಂಡರು, ಬೂತ್ ಅಧ್ಯಕ್ಷರು, ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಪೇಜ ಪ್ರಮುಖರು ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.