ಬೆಳಗಾವಿ.
ಬೆಂಡವಾಡ ಗ್ರಾಮದ ಲಲಿತಾ ಸದಾನಂದ ಕರಜಗಿ ವಯಸ್ಸು 24 ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಅಸಲಿಗೆ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸ್ ರ ತನಿಖೆ ನಂತರ ತಿಳಿಯಲಿದೆ
ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಭೆಂಡವಾಡ ಗ್ರಾಮದಲ್ಲಿ ನಡೆದಿದೆ, ಮಗಳನ್ನು ಪತಿ ಮನೆಯರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಘಟನೆ ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಶಂಕೆ, ಲಲಿತಾಳನ್ನ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಲಲಿತಾ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ
ಘಟನೆ ಆಗುತ್ತಿದ್ದಂತೆ ಲಲಿತಾ ಪತಿ ಹಾಗೂ ಕುಟುಂಬಸ್ಥರು ಎಸ್ಕೇಪ್ ಆಗಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಹಲವಾರು ಸಂಶಯಕ್ಕೆ ಕಾರಣವಾಗಿದೆ. ಸ್ಥಳಕ್ಕೆ ರಾಯಬಾಗ ಪೋಲಿಸರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ . ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.