ವಿ .ಬಿ.ಎಸ್.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Share the Post Now

ಮೂಡಲಗಿ.

ವಿ ಬಿ ಎಸ್ ಎಂ ಶಾಲೆಯಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನೇಕ ವಿದ್ಯಾರ್ಥಿಗಳು ರಾಜ್ಯದ ಶ್ರೇಷ್ಠ ವ್ಯಕ್ತಿತ್ವಗಳ ವೇಷಭೂಷಣ ತೊಟ್ಟು ಶೃಂಗಾರ ಮಾಡಿ ತೆರೆದ ವಾಹನದಲ್ಲಿ ಮೂಡಲಗಿ ತಾಲೂಕಾ ಮಟ್ಟದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ ಮತ್ತು ಹೆಮ್ಮೆಯನ್ನು ಸಾರಿದರು.
ಮೆರವಣಿಗೆಯ ನಂತರ ಶಾಲಾ ಆವರಣದಲ್ಲಿ ಭಾವಪೂರ್ಣ ವೇದಿಕೆ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ವೈಭವವನ್ನು ತೋರಿಸುವ ನೃತ್ಯ, ಭಾಷಣ ಹಾಗೂ ಕಿರು ನಾಟಕಗಳ ಮೂಲಕ ಕಾರ್ಯಕ್ರಮಕ್ಕೆ ವಿಶಿಷ್ಟ ಮೆರುಗು ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯೋಪಾಧ್ಯಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಲ್ಲರ ಸಹಕಾರದಿಂದ ಕನ್ನಡ ನಾಡಿನ ಸಾಂಸ್ಕೃತಿಕ ಮೌಲ್ಯಗಳನ್ನು ಗೌರವಿಸುವ ಉದ್ದೇಶದಿಂದ ಈ ರಾಜ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲಾಯಿತು.
ವರದಿ ಮುರಿಗೆಪ್ಪ ಮಾಲಗಾರ

Leave a Comment

Your email address will not be published. Required fields are marked *

error: Content is protected !!