ಬೆಳಗಾವಿ. ಅಥಣಿ
ವರದಿ – ಸಿದ್ದಾರೂಢ ಬಣ್ಣದ
ಅಥಣಿ: ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಶನಿವಾರ ದಿ. 6 ರಂದು ಮಧ್ಯಾಹ್ನ 12 ಗಂಟೆಗೆ ಅಥಣಿ ಪಟ್ಟಣಕ್ಕೆ ಆಗಮಿಸಲಿದ್ದಾರೆ. ಪಟ್ಟಣದ ಭೋಜರಾಜ ಕ್ರೀಡಾಂಗಣದಲ್ಲಿ ಜರುಗುವ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಮತಯಾಚನೆ ಸಭೆಯಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಥಣಿ ಕ್ಷೇತ್ರದ ಚುನಾವಣಾ ಪ್ರಭಾರಿ ವಿಜಯಕುಮಾರ ಕಡಗಿನೂರ ಹೇಳಿದರು.
ಅವರು ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಥಣಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮ್ನಳ್ಳಿ ಅವರ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವರಾದ ಅಮಿತ ಶಾ ಅವರು ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ರೋಡ್ ಶೋ ಕಾರ್ಯಕ್ರಮ ಇರುವುದಿಲ್ಲ, ನೇರವಾಗಿ ಭೋಜರಾಜ ಕ್ರೀಡಾಂಗಣಕ್ಕೆ ಆಗಮಿಸಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅವರ ಜೊತೆಗೆ ಭಾರತೀಯ ಜನತಾ ಪಕ್ಷದ ಅನೇಕ ಹಿರಿಯ ಮುಖಂಡರು ಆಗಮಿಸಲಿದ್ದಾರೆ. ಆದ್ದರಿಂದ ಮತಕ್ಷೇತ್ರದ ಬಿಜೆಪಿ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉಸ್ತುವಾರಿ ಚಂದ್ರಶೇಖರ ಕವಟಗಿ, ಮುಖಂಡರಾದ ಉಮೇಶ್ ರಾವ ಬಂಟೋದಕರ, ಪ್ರಭಾಕರ ಚವ್ಹಾಣ, ಡಾ. ರವಿ ಸಂಕ, ಪುಟ್ಟು ಹಿರೇಮಠ, ರವಿ ಪೂಜಾರಿ, ಮುರುಗೇಶ ಕುಮಟಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.