siddaramayya satish jarakiholi dk shivakumar

ಬೆಳಗಾವಿಯ 18 ಕ್ಷೇತ್ರದಲ್ಲಿ ಕಾಂಗ್ರೆಸ್ 15ರಲ್ಲಿ ಗೆಲುವು ಸಾಧಿಸಲಿದೆ :ಸಿದ್ದರಾಮಯ್ಯ

Share the Post Now

ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಮತಕ್ಷೇತ್ರ ಹೊಂದಿರುವ ಬೆಳಗಾವಿಯ 18 ಕ್ಷೇತ್ರದಲ್ಲಿ ಕಾಂಗ್ರೆಸ್ 15ರಲ್ಲಿ ಗೆಲುವು ಸಾಧಿಸಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ, ಗಾಳಿ ಬಿಸುತ್ತಿದೆ. ಬಿಜೆಪಿ ವಿರುದ್ಧವಾದ ಅಲೆ ಇದೆ. ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ‌ ಕ್ರಮ ಈ ಕಾರಣದಿಂದ ಜನರು ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಘೋಷಣೆ ಮಾಡಿರುವ ಐದು ಗ್ಯಾರಂಟಿಯಿಂದ ಜನರಿಗೆ ನಂಬಿಕೆ ಬಂದಿದೆ. ಜನರಿಗೆ ಮೊದಲಿನಿಂದಲೂ ಕಾಂಗ್ರೆಸ್ ಪರ ನಂಬಿಕೆ ಇದೆ. ಹಿಂದೆ ನಾವು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಾವು ಜನರ ನಂಬಿಕೆ ಉಳಿಸಿಕೊಂಡಿದ್ದೇವು. ನುಡಿದಂತೆ ನಡಿದಿದ್ದೇವೆ. ಮುಂದೆಯೂ ನಡೆಯುತ್ತೇವೆ. ಈ ಬಾರಿ ಕಾಂಗ್ರೆಸ್ ಗೆ ಜನ ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರಚಾರ ಮಾಡುತ್ತಾರೆ. ಬೆಳಗಾವಿಗೆ ನಾವು ಪ್ರಚಾರಕ್ಕೆ ಬಂದಾಗ ನಮಗೂ ಪ್ರಚಾರದ ವಾಹನ ಕೊಡುತ್ತಾರೆ. ಅಷ್ಟೆ ಅಲ್ಲ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರೂ ಪ್ರಚಾರಕ್ಕೆ ಬಂದರೆ ಈ ವಾಹನವನ್ನು ಬಳಸುತ್ತಾರೆ. ಆದರೆ ಹೆಚ್ಚಾಗಿ ಜಿಲ್ಲೆಯಲ್ಲಿ ಪ್ರವಾಸ ಮಾಡುವವರು ಸತೀಶ ಜಾರಕಿಹೊಳಿ ಎಂದರು.

ಈ‌ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಘಟಕದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ಕೆಪಿಸಿಸಿ ಸದಸ್ಯ ರಾಜೇಂದ್ರ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!