ಬೆಳಗಾವಿ
ರಾಯಬಾಗ ತಾಲೂಕ ಹಂದಿಗುಂದ ಗ್ರಾಮಕ್ಕೆ ಸಂಸದ ಬಿ.ವೈ. ರಾಘವೇಂದ್ರ ಆಗಮನ;
ವರದಿ: ಸಂಗಮೇಶ ಹಿರೇಮಠ.
ಮುಗಳಖೋಡ: ರಾಯಬಾಗ ತಾಲೂಕಿನ ಸುಕ್ಷೇತ್ರ ಹಂದಿಗುಂದ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ರವಿವಾರ ಇಂದು ದಿನಾಂಕ 29 ರಂದು ಮುಂಜಾನೆ 10 ಗಂಟೆಗೆ ಶ್ರೀ ಹಾನಗಲ್ಲ ಕುಮಾರೇಶ್ವರ ಸಾಂಸ್ಕೃತಿಕ ಭವನ ಲೋಕಾರ್ಪಣೆ ಆಗಲಿದೆ.
ಭಾರತಿ ಜನತಾ ಪಕ್ಷದ ನಾಯಕರು, ಶಿವಮೊಗ್ಗ ಕ್ಷೇತ್ರದ ಸಂಸದರು ಬಿ.ವೈ.ರಾಘವೇಂದ್ರರವರು ಶ್ರೀ ಹಾನಗಲ್ಲ ಕುಮಾರೇಶ್ವರ ಸಾಂಸ್ಕೃತಿಕ ಭವನವನ್ನು ಲೋಕಾರ್ಪಣೆ ಮಾಡುವರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಸಚಿವ ಗೋವಿಂದ ಕಾರಜೋಳ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಸಚಿವೆ ಶಶಿಕಲಾ ಜಿಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಪಿ.ರಾಜೀವ್, ಶಾಸಕ ದುರ್ಯೋಧನ ಐಹೊಳೆ, ಶಾಸಕ ಸಿದ್ದು ಸವದಿ ಮತ್ತಿತರು ಆಗಮಿಸುವರು ಎಂದು ಶ್ರೀ ಸಿದ್ದೇಶ್ವರ ವಿರಕ್ತ ಮಠದ ಪೀಠಾಧಿಪತಿ ಶಿವಾನಂದ ಮಹಾಸ್ವಾಮಿಗಳು ಸುದ್ದಿಗಾರರಿಗೆ ತಿಳಿಸಿದರು.