ವರದಿ: ಸಂಜೀವ ಬ್ಯಾಕುಡೆ, ಕುಡಚಿ
ಬೆಳಗಾವಿ : ರಾಯಬಾಗ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷಣ ಪ್ರಸಾರಕ ಮಂಡಳದ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಎಸ್.ಪಿ.ಎಮ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಐ.ಎಸ್ ಗೋಕಾಕ ಹಾಗೂ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕರಾದ ಎಸ್.ಎಮ್. ಲೈನದಾರ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಸ್.ಎಸ್. ಕುರಬೇಟಿ,ಉಪನ್ಯಾಸಕರಾದ ಪಿ.ಆರ್ ಸವದತ್ತಿ,ಆಯ್.ಆರ್ ಪತ್ತಾರ,ಎಮ್.ಆರ್ ಕಠಾರಿ,ರಾಮು ಕಾಕಡೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.