ವರದಿ: ಸಂಗಮೇಶ ಹಿರೇಮಠ.
ಮುಗಳಖೋಡ: ಪಟ್ಟಣದ ಶ್ರೀ ಮಹಾಕಾಳಿ ಶಿಕ್ಷಣ ಸಂಸ್ಥೆಯ ಶ್ರೀ ಯಲ್ಲಾಲಿಂಗ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ, ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ಶಬಾನಾ ಮತ್ತೆ ಅವರಿಗೆ 2023-24ನೇ ಸಾಲಿನ ತಾಲೂಕಾ ಗೈಡ್ಸ್ ಸೇವಾರತ್ನ ಪ್ರಶಸ್ತಿ ಲಭಿಸಿದೆ.
ರಾಯಬಾಗ್ ಮಹಾವೀರ್ ಸಭಾಭವನದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಶಬಾನಾ ಮತ್ತೆ ಅವರನ್ನು ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಲಾಯಿತು.
ಸಾಧನೆಗೈದ ಶಿಕ್ಷಕಿಗೆ ಮಹಾಕಾಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು, ಹಾಗೂ ಸ್ಥಳೀಯ ಸದಸ್ಯರು, ಶಾಲೆಯ ಪ್ರಧಾನ ಗುರುಗಳು, ಸಿಬ್ಬಂದಿಗಳು ಸೇರಿದಂತೆ ಮುದ್ದು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.