ಬಿಜೆಪಿಗೆ ಗುಡ್ ಬೈ ಹೇಳಿದ ಜಗದೀಶ್ ಶೆಟ್ಟರ್: ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ

Share the Post Now

ಧಾರವಾಡ: ಈ ಬಾರಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದಾರೆ. ನಾಳೆ ರಾಜೀನಾಮೆ ಸಲ್ಲಿಸೋದಾಗಿ ಹೇಳಿದ್ದಾರೆ. ಭಾರವಾದ ಹೃದಯದಿಂದ ಇದನ್ನು ಹೇಳುತ್ತಿದ್ದೇನೆ. ಪಾರ್ಟಿ ಕಟ್ಟಿ ಬೆಳಸಿದ್ದೆ, ಪಾರ್ಟಿ ಬಿಟ್ಟು ಹೋಗಬೇಕಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ಬಾರದೆ ಕೆಲಸ ಆಗತ್ತೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ ಎಂದು ಜಗದೀಶ್ ಶೆಟ್ಟರ್​ ಹೇಳಿದರು. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದ್ರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ ಎಂದರು.
ನನ್ನ ಮೂವತ್ತು ವರ್ಷ ರಾಜಕಾರಣದ ಕಳೆದ ಮೂರು ತಿಂಗಳು ಅತ್ಯಂತ ಕೆಟ್ಡ ದಿನ. ನಾನು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷವನ್ನು ಕೆಳ ಮಟ್ಟದಿಂದ ಕಟ್ಟಿದ್ದೇನೆ. ಪಕ್ಷ ಎಲ್ಲ ನನಗೆ ಗೌರವ ಕೊಟ್ಟಿದೆ. ಹೀಗಾಗಿ ಹೃದಯಪೂರ್ವಕ ಧನ್ಯವಾದ ಎಂದು ಶೆಟ್ಟರ್​ ಹೇಳಿದರು.
ಪಕ್ಷ ನನಗೆ ಎಲ್ಲಾ ಸ್ಥಾನಮಾನ ನೀಡಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಹೇಳಿದರು. ನಿವಾಸದಲ್ಲಿ ಜಗದೀಶ್ ಶೆಟ್ಟರ್‌ ಮತ್ತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ ಎಂದರು.

Leave a Comment

Your email address will not be published. Required fields are marked *

error: Content is protected !!