ಬೆಳಗಾವಿ.ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಅಪರಾಧ ಪಿಎಸ್ಐ ಎಸ.ಜಿ. ಖೋತ ವಾಹನ ಸವಾರರಿಗೆ ಗುಲಾಬಿ ಹೂ ನೀಡುವ ಮೂಲಕ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಿದರು.
ಇತ್ತೀಚಿನ ದಿನಗಳಲ್ಲಿ ಯುವ ಜನತೆ ಚಾಲನಾ ನಿಯಮಗಳನ್ನು ಪಾಲಿಸಿದೆ ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡುತ್ತಿದ್ದು ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ ಅಪಘಾತದಲ್ಲಿ ಹೆಚ್ವಾಗಿ ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ ಆದ್ದರಿಂದ ವಾಹನ ಚಾಲನೆ ಮಾಡುವಾಗ ಟ್ರಾಫಿಕ್ ನಿಯಮಗಳನ್ನು ಪಾಲಿಸುವುದರೊಂದಿಗೆ ವಾಹನ ಚಾಲನೆ ಮಾಡುವಾಗ ವಾಹನ ಚಾಲಕರು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ವಾಹನ ಸವಾರರಿಗೆ ಗುಲಾಬಿ ಹೂ ನೀಡುವ ಮೂಲಕ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಎಎಸ್ಐ ಸುರೇಶ್ ಕಲ್ಯಾಣಪುರ, ಅಣ್ಣಪ್ಪ ಮಂಗಸೂಳಿ, ಸಿಬ್ಬಂದಿಗಳಾದ ಸತೀಶ್ ಡಂಗೆಣ್ಣವರ, ಜಮಾದಾರ ಉಪಸ್ಥಿತರಿದ್ದರು