ವರದಿ :ಸಂಜೀವ್ ಬ್ಯಾಕುಡೆ
ಬೆಳಗಾವಿ.ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಡಾ. ಬಿ.ಆರ.ಅಂಬೇಡ್ಕರ ಶಿಕ್ಷಣ ಸಂಸ್ಥೆಯ ಬಿ. ಶಂಕರಾನಂದ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಪದಕ ಪಡೆದಿದ್ದಾರೆ.
ಚಂಡಿಗಡದಲ್ಲಿ ಜರುಗಿದ ಸೌತ್ ವೆಸ್ಟ್ ಜೂನ್ ಅಂತರ್ ವಿಶ್ವವಿದ್ಯಾಲಯಗಳ ರಾಷ್ಟ್ರಮಟ್ಟದ ಕುಸ್ತಿಯಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದಿದ್ದಾರೆ.
ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಕುಮಾರ್ ಮಹೇಶ್ ಲಂಗೋಟಿ 70 kg ಕುಸ್ತಿಯಲ್ಲಿ ಬೆಳ್ಳಿ ಪದಕ ಪಡೆದರೆ, ಸದಾಶಿವ ನಲವಾಡೆ 79 ಕೆಜಿ ಫ್ರೀ ಸ್ಟೈಲ್ ಕುಸ್ತಿಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ಅಂತರ್ ವಿವಿ ರಾಷ್ಯಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ಈ ಸಾಧನೆ ಮಾಡುವ ಮೂಲಕ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಬಿ. ಶಂಕರಾನಂದ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ರಾಜ ಘಾಟಗೆ, ಪ್ರಾಚಾರ್ಯರಾದ ಎ. ಎಸ್. ಕಾಂಬಳೆ, ಕ್ರೀಡಾಪಟುಗಳಿಗೆ ನಿರಂತರ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ನಿರ್ದೇಶಕರಾದ ಆರ್. ಎಂ. ಮಹೇಶವಾಡಗಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ