ಬೆಳಗಾವಿ. ಕುಡಚಿ :ಪಟ್ಟಣದ ಜುನ್ನೇದಿಯಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಶ್ರೀ ಎಂ.ಕೆ.ಶೇಖ್ ಇವರ ಸಾಹಿತ್ಯ ಹಾಗೂ ಶಿಕ್ಷಣದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಶ್ರೀಯುತರನ್ನು “ಮಹಾತ್ಮಾ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಜಯಪುರದ ತೊರವಿಯ ಡಾ.ಬಾಬಾಸಾಹೇಬ ಅಂಬೇಡ್ಕರ್ ಸಮುದಾಯ ಭವನದಲ್ಲಿ ಇದೇ ತಿಂಗಳ ದಿನಾಂಕ 21ಕ್ಕೆ ಪ್ರಶಸ್ತಿ ಪ್ರಧಾನ ಮಾಡಲಾಗುವದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಜಿ.ಎಸ್ ಕಾಂಬಳೆ ಹಾಗೂ ಕಾರ್ಯದರ್ಶಿಗಳಾದ ರಮೇಶ ನಾಯಕ ತಿಳಿಸಿದ್ದಾರೆ.