ಬೆಳಗಾವಿ.
ರಾಯಬಾಗ ತಾಲೂಕಿನ ಅಲಖನೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಶೇಷಚೇತನರಿಗೆ ವಿಶೇಷ ಜಾಬ್ ಕಾರ್ಡ್ ವಿತರಣೆ.
ಕುಡಚಿ ಮತಕ್ಷೇತ್ರದ ಅಲಖನೂರ ಗ್ರಾಮ ಪಂಚಾಯತ ವತಿಯಿಂದ ವಿಶೇಷಚೇತನರಿಗೆ ವಿಶೇಷ ಜಾಬ್ ಕಾರ್ಡ್ ವಿತರಣಾ ಅಭಿಯಾನ ಹಮ್ಮಿಕೊಂಡಿದ್ದರು.
ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ 21 ವಿಶೇಷಚೇತನರಿಗೆ ಜಾಬ್ ಕಾರ್ಡ್ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಕದ್ದು, ಕಾಂಗ್ರೆಸ್ ಬ್ಲಾಕ ಅಧ್ಯಕ್ಷ ಪ್ರದೀಪ ಹಾಲಗುಣಿ, ಸದಾಶಿವ ಗಡ್ಡಿ, ಸಂದೀಪ ಗಡ್ಡಿ, ಸಹಾಯಕ ನಿರ್ದೇಶಕರು (ಗ್ರಾ.ಉ) ಐಇಸಿ ಸಂಯೋಜಕರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಯರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಾದೇವ ನಡಿವಿನಮನಿ, ಹಾಗೂ ಸಿಬ್ಬಂದಿಗಳು, ಕೂಲಿಕಾರರು ಉಪಸ್ಥಿತರಿದ್ದರು.
